ಜೀವನದಲ್ಲಿ ಕೆಲವೊಮ್ಮೆ ಸುಳ್ಳು ಹೇಳದೆ ವಿಧಿ ಇಲ್ಲ ಅಂತಹ ಪರಿಸ್ತಿತಿ ಉದ್ಭವ ಆಗುತ್ತೆ ; ಕಹಿಯಾದ ಸತ್ಯ ಹೇಳುವುದಕ್ಕಿಂತ , ಸಿಹಿ ಯಾದ ಸುಳ್ಳು ಬಹಳ ಹಿತವಾಗಿರುತ್ತೆಯಾರಿಗೂ ಅದರಿಂದ ತೊಂದರೆಯಾಗಲಿ, ಅನಾನುಕೂಲವಾಗಲಿ ಆಗುವುದಿಲ್ಲ. 'ಸತ್ಯಂ ಬ್ರೂಯಾದ್, ಪ್ರಿಯಂ ಬ್ರೂಯಾದ್, ನ ಬ್ರೂಯಾದ್ ಸತ್ಯಂ ಅಪ್ರಿಯಂ' ಅಲ್ಲವೇ ? ಹಾಗಾಗಿ ಕೆಲವೊಮ್ಮೆ ಸತ್ಯ ಹೇಳೋದ್ರಿಂದ ತುಂಬಾ ಅನಾಹುತಗಳು, ಕಹಿ ಘಟನೆಗಳು, ಸಂಬಂಧ ಒಡೆದುಹೋಗುವಂತ ಘಟನೆಗಳು ನಡೆಯುತ್ತವೆ. ಇಂತಹ ಪ್ರಸಂಗಗಳು ದಿನ ನಿತ್ಯ ಎಲ್ಲರ ಜೀವನದಲ್ಲೂ ನಡೆಯುತ್ತವೆ. ವೈದ್ಯರು ಕೆಲವೊಮ್ಮೆ, ರೋಗಿಗಳು ಜೀವಂತವಾಗಿರಲು ಅವರ ಆಯಸ್ಸುಕೆಲವೇ ತಿಂಗಳು ಅಥವಾ ಕೆಲವೇ ದಿನಗಳೇ ಆಗಲಿ ಇರುವಾಗ ವೈದ್ಯರು ಅಂತಹ ಸಂಧರ್ಭಗಳಲ್ಲಿ ಸುಳ್ಳು ಹೇಳಲೇ ಬೇಕಾದ ಪರಿಸ್ಥಿತಿ ಉದ್ಭವಿಸುತ್ತದೆ ಹಾಗೂ ಅನಿವಾರ್ಯವಾಗಬಹುದು. ರೋಗಿಯ ಬಂಧುಗಳಿಗೆ ನಿಜ ಹೇಳಲೇ ಬೇಕಾಗುತ್ತದೆ. ಆದರೆ ರೋಗಿಯ ಹತ್ತಿರ ಇಂತಹ ಕಹಿ ಸುಳ್ಳನ್ನು ಹೇಳಿ ಅವನ ಉಳಿದಿರುವ ಕೆಲವು ದಿವಸಗಳನ್ನು ಜೀವಂತ ನರಕ ಮಾಡುವುದು ಸರಿಯೇ? ಅವನಿಗೆ ನಿಜಾಂಶ ತಿಳಿಸದೆ ಹೋದರೆ ಅವನು ಇನ್ನು ಸ್ವಲ್ಪ ಹೆಚ್ಚು ದಿನ ಬದುಕುಳಿಯಬಹುದು ಅಥವಾ ಅವನ ಅರೋಗ್ಯ ಸುಧಾರಿಸಿ ಚೇತರಿಸಿ ಕೊಳ್ಳಲೂ ಬಹುದು ! ರೋಗಿಯು ಬದುಕಿರುವನಕ ಅವನನ್ನು ಖುಷಿಯಾಗಿ ಇಟ್ಟು ಕೊಳ್ಳುವುದೇ ವೈದ್ಯರ ಧ್ಯೇಯ ಕೂಡ. ಸಿಹಿ ಸುಳ್ಳು ನಿಜ ಗೊತ್ತಾದಾಗ ಕಹಿ ಆಗುತ್ತದೆ ..ಮಗ ಫಸ್ಟ್ ಕ್ಲಾಸ್ ಅಂತ ತಂದೆ ತಾಯಿ ಖುಶಿಪಟ್ಟಿರುತ್ತಾರೆ .ನಿಜ ಗೊತ್ತಾದಾಗ ತುಂಬಾ ದುಃಖ ವಾಗುತ್ತದೆ .ಸಂಕಷ್ಟದಲ್ಲಿರುವವರನ್ನು ಪಾರು ಮಾಡಲು ಸುಳ್ಳು ಹೇಳಿದರೆ ಅದು ಒಳ್ಳೆಯ ಕೆಲಸಕ್ಕಾಗಿ .ಸಾವಿರ ಸುಳ್ಳು ಹೇಳಿ ಮದುವೆ ಮಾಡುವುದು ತೊಂದರೆಯೇ ..ವಾಸ್ತವ ಗೊತ್ತಾದಾಗ ಆಗುವ ಅನುಕೂಲಕ್ಕಿಂತ ತೊಂದರೆಯೇ ಹೆಚ್ಚು .ಸುಳ್ಳು ಒಂದು ಆಯುಧವಾದರೆ ಅದನ್ನು ನಮ್ಮ ,ಬೇರೆಯವರ ರಕ್ಷಣೆಗೆ ಬೇಕಾದರೂ ಉಪಯೋಗಿಸಬಹುದು ,ಇಲ್ಲವೇ ತೊಂದರೆ ಕೊಡಲು ,ಹಿಂಸೆ ಮಾಡಲೂ ಉಪಯೋಗಿಸಬಹುದು ನೋಡಿ ಇದು ' ಒಳ್ಳೆ ಸುಳ್ಳು' ಅಲ್ಲವೇ ಸ್ನೇಹಿತರೆ ?? ಹಾಗಾಗಿ ನಾನು ಈ ನಿರ್ಧಾರಕ್ಕೆ ಬಂದೆ ''ಕಹಿಯಾದ ಸತ್ಯ ಹೇಳುವುದಕ್ಕಿಂತ , ಸಿಹಿ ಯಾದ ಸುಳ್ಳು ಹೇಳುವುದೇ ಲೇಸು'' ಹಾಗೆ ಯೋಚಿಸುತ್ತ ಈ ಲೇಖನ ಬರೆಯಲು ಸ್ಪೂರ್ತಿ ಬಂತು !!
ಸುಳ್ಳು ಗಳಲ್ಲಿ ಹಲವು ವಿಧ. ೧) ಶುದ್ದ ಸುಳ್ಳು ೨) ಸಿಹಿ ಸುಳ್ಳು ೩) ಕಹಿ ಸುಳ್ಳು ೪) ಸ0ಕಷ್ಟದಿಂದ ಪಾರು ಮಾಡೋ ಸುಳ್ಳು ೫) ಸಹಾಯ ಮಾಡಲು ಸೃಷ್ಟಿಸುವ ಸುಳ್ಳು ೬) ಸಾವಿರ ಸುಳ್ಳು ಹೇಳಿ 'ಮದುವೆ' ಮಾಡೋ ಸುಳ್ಳು
೭) ಹುಟ್ಟು ಸುಳ್ಳು ಇತ್ಯಾದಿ ಇತ್ಯಾದಿ ......
೧) ಶುದ್ದ ಸುಳ್ಳು ಅಂದ್ರೆ ಅದರಲ್ಲಿ ಒಂದಿಷ್ಟೂ ಸತ್ಯಾಂಶ ಇರುವುದಿಲ್ಲ ; ಅದು 'ಶುದ್ದ ಸುಳ್ಳು'
೨) ಸಿಹಿ ಸುಳ್ಳು ಅಂದ್ರೆ ಕೆಲವೊಮ್ಮೆ ನ ಪಾಸಾದ ವಿಧ್ಯಾರ್ಥಿ 'ನಾನು ಫಸ್ಟ್ ಕ್ಲಾಸ್ನಲ್ಲಿ ಪಾಸಾದೆ' ಅಂತ ತನ್ನ ಪೋಷಕರಿಗೆ ಹೇಳಿದಾಗ ಅವರಿಗಾಗುವ ಆನಂದ ಹೇಳತೀರದು ಅಲ್ವೇ ?
೩) ಕಹಿ ಸುಳ್ಳು ಅಂದ್ರೆ ನಿಮ್ಮ ಅಜ್ಜಿಗೆ ಸೀರಿಯಸ್ ಅಂತ ಮೆಸೇಜ್ ಕೊಡ್ತಾರೆ , ಆದ್ರೆ ಅಜ್ಜಿ ಶಿವ ಪಾದ ಸೇರಿ ಕೊಂಡು ಗಂಟೆಗಳೇ ಕಳೆದಿರುತ್ತೆ; ಯಾಕೆಂದ್ರೆ ಸಾವಿನ ಸುದ್ದಿ ಇನ್ನೂ ಕಹಿಯಾಗಿರುತ್ತೆ, ಜೀರ್ಣಿಸಿಕೊಳ್ಳಲು ಕಷ್ಟ ಅಲ್ವೇ ?
೪) ಯಾರನ್ನೇ ಅಗಲಿ ಅವರನ್ನು ಸಂಕಷ್ಟ ದಿಂದ ಪಾರು ಮಾಡಲು ಒಂದು ಸುಳ್ಳು ಹೇಳಿದರೆ ಅಡ್ಡಿ ಇಲ್ಲ ಅಲ್ವೇ ? ಒಮ್ಮೆ ಸನ್ಯಾಸಿ ಯೊಬ್ಬ ಧ್ಯಾನದಲ್ಲಿರುವಾಗ ಒಬ್ಬ ಬಡಪಾಯಿ ಪ್ರಾಣ ಭೀತಿ ಇಂದ ಬಂದು ಅವನಲ್ಲಿ ಆಶ್ರಯ ಪಡೆಯುತ್ತಾನೆ , ಆಗ ಒಬ್ಬ ಅವನನ್ನು ಕೊಲ್ಲಲು ಹುಡುಕಿಕೊಂಡು ಬಂದಾಗ ಅವನು ನಮ್ಮ ಆಶ್ರಮದಲ್ಲಿ ಇಲ್ಲ ಎಂದು ಆ ಸನ್ಯಾಸಿ ಸುಳ್ಳು ಹೇಳಿ ಅವನ ಪ್ರಾಣ ಕಾಪಾಡುತ್ತಾನೆ!
೫) ಅದೇ ರೀತಿ ಯಾರಿಗಾದರೂ ಸಹಾಯ ಮಾಡ ಬೇಕಾದಾಗ ಒಂದು ಸುಳ್ಳು ಸೃಷ್ಟಿಸಿ ಅವರಿಗೆ ಸಹಾಯ ಮಾಡುವುದರಲ್ಲಿ ಅರ್ಥ ಇದೆ ಅಲ್ವೇ ?
೬) ಮತ್ತೆ ನಮ್ಮೆ ಹಿರಿಯರು ಹೇಳಿದ್ದಾರೆ ಸಾವಿರ ಸುಳ್ಳು ಹೇಳಿ 'ಮದುವೆ' ಮಾಡ ಬೇಕು ಅಂತ ; ಹಾಗಂದ್ರೆ ಸಾವಿರ ಸುಳ್ಳು ಹೇಳಿ ಅಂತಲ್ಲ ! ಒಂದು ಶುಭ ಕಾರ್ಯಕ್ಕೆ ಸುಳ್ಳು ಹೇಳಿದರೆ ಅಡ್ಡಿ ಇಲ್ಲ ಅಲ್ವೇ?
೭) ಇನ್ನು ಹುಟ್ಟು ಸುಳ್ಳು ಅಂದ್ರೆ ; ಕೆಲವರು ಹುಟ್ಟಿನಿಂದ ಸುಳ್ಳು ಹೇಳೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ ; ಅದೇ 'ಹುಟ್ಟು ಸುಳ್ಳು'
ಹಾಗೆ ಬರೆಯುತ್ತಾ ಹೋದರೆ ನಾನು ಕೂಡ ಸುಳ್ಳಿನ 'ಸರ ಮಾಲೆ' ಪೋಣಿಸಬೇಕಾಗುತ್ತೋ ಏನೋಪ್ಪ ! ಸುಳ್ಳಿನ ಇನ್ನೊಂದು ಅನಾನುಕೂಲತೆ. ಎಂದರೆ ನೀವು ಹೇಳಿದ ಸುಳ್ಳನ್ನ ನೆನಪಿಟ್ಟುಕೊಳ್ಳಬೇಕಾಗುವುದು.. ಬೇಡ ಬೇಡಾ ನನಗೆ ತುಂಬಾ ಮರೆವು ಸ್ವಾಮಿ !! ಸಧ್ಯಕ್ಕೆ ಇಲ್ಲಿಗೆ ನನ್ನ 'ಸುಳ್ಳಿನ ಪುರಾಣ ' ಕ್ಕೆ ಇತಿಶ್ರೀ ಹಾಡುತ್ತೇನೆ. ಜೈ ಪುಂಡರೀಕ ವರದೇ ...............
ಈ ಸುಳ್ಳಿನ ಸರಮಾಲೆಯನ್ನು ನಿಜಾಗಲೂ ಬರೆದು ಇಟ್ಟುಕೊಂಡೆ! ;-)
ReplyDeleteso sweet ; thank u
ReplyDelete